







ಕಾಣಿಯೂರು: ಸ್ವಯಂ ಪ್ರೇರಣೆಯಿಂದ ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ಮಾಡುತ್ತಿರುವ ಕುದ್ಮಾರು ಗ್ರಾಮದ ಅಕ್ಷಯ್ ಬರೆಪ್ಪಾಡಿ ಮತ್ತು ಸತೀಶ್ ಆರುವಾರ ಅವರನ್ನು ಕಡಬ ತಾಲೂಕು ಪಂಚಾಯತ್ ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಸ್ವಚ್ಛತಾ ಸೇನಾನಿ ಗೌರವ ನೀಡಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಸಹಿತ ಹಲವಾರು ಮಂದಿ ಗಣ್ಯರು ಉಪಸ್ಥಿತರಿದ್ದರು.













