ಇಂಡಿಪೆಂಡೆನ್ಸ್ ಡೇ ವಾಲಿಬಾಲ್ ಕಪ್ ರಾಮಕುಂಜಕ್ಕೆ ಪ್ರಥಮ

0

ರಾಮಕುಂಜ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅಂಬೇಡ್ಕರ್ ನಗರದಲ್ಲಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ತಂಡವು ಪ್ರಥಮ ಬಹುಮಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ.


ಪಂದ್ಯಾಟದಲ್ಲಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಹಾಗೂ ಹಿರಿಯ ವಿದ್ಯಾರ್ಥಿ ಸಲೀಂ ಹಾಗೂ ಅಕ್ಷಯ್ ಅವರು ತರಬೇತಿಯನ್ನು ನೀಡಿರುತ್ತಾರೆ. ತಂಡದ ಆಟಗಾರ ಶಬೀಲ್ ಅವರು ಉತ್ತಮ ಆಲ್‌ರೌಂಡರ್ ಪ್ರಶಸ್ತಿಗೆ ಭಾಜನರಾದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರಾದ ವೆಂಕಟೇಶ್ ದಾಮ್ಲೆ, ಶಿಕ್ಷಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here