







ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದಲ್ಲಿ ಶಿಶಿಕ್ಷು ಅಧಿನಿಯಮ 1961 ರನ್ವಯ ಶಿಶಿಕ್ಷು ತರಬೇತಿ ಪಡೆಯಲು ಇಚ್ಚಿಸುವ ಐಟಿಐ ಹಾಗೂ ಎಸ್ಎಸ್ಎಲ್ಸಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಮೆಕ್ಯಾಣಿಕ್ ಡೀಸಿಲ್, ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಇಲೆಕ್ಟ್ರಿಷಿಯನ್, ಮೋಟಾರ್ ಮೆಕ್ಯಾನಿಕ್ ವೆಹಿಕಲ್, ವೆಲ್ಡರ್, ಫಿಟ್ಟರ್, ಮೋಟಾರ್ ವೆಹಿಕಲ್ ಬಾಡಿ ಬಿಲ್ಡರ್, ಮೆಕ್ಯಾನಿಕ್ ಅಟೋಮೊಬೈಲ್, ಪಾಸಾ ವೃತ್ತಿಗಳು, ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಮೆಕ್ಯಾನಿಕ್ ಡೀಸಿಲ್ ವೃತ್ತಿಗಳಿಗೆ ತರಬೇತಿ ಲಭ್ಯವಿದೆ. ಅಭ್ಯರ್ಥಿಗಳು ಆಯೋಗದ ಅಂತರ್ಜಾಲ www.apprenticeshipindia.org ನಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಿ ಆ.19ರಿಂದ 30 ರ ಒಳಗೆ ಬೆಳಿಗ್ಗೆ 10 ರಿಂದ ಸಂಜೆ 5.30 ಹಾಗೂ ಶನಿವಾರದಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ಒಳಗೆ ವಿಭಾಗೀಯ ಕಛೇರಿ, ಕರಾರಸಾ ನಿಗಮ, ಮುಕ್ರಂಪಾಡಿ, ದರ್ಬೆ ಇಲ್ಲಿಗೆ ಅರ್ಜಿಯ ಪ್ರತಿ ಸಲ್ಲಿಸಬೇಕು. ಆ.31ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಯೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.













