ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ : ತಜ್ಞ ವೈದ್ಯರ ಸಹಿತ ಅಗತ್ಯ ಸೌಲಭ್ಯ ಒದಗಿಸಲು ಮನವಿ

0

ಉಪ್ಪಿನಂಗಡಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಜ್ಞ ವೈದ್ಯರ ನೇಮಕ ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವಂತೆ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮ್ಮದ್ ತೌಸಿಫ್ ಯು.ಟಿ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ರವರಿಗೆ ಮನವಿ ಸಲ್ಲಿಸಿದರು.

ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರವು 75 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದು, ಏಳು ಗ್ರಾಮ ಪಂಚಾಯತ್‌ಗಳ ಸುಮಾರು 24,೦೦೦ಕ್ಕೂ ಅಧಿಕ ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿದೆ. ಉಪ್ಪಿನಂಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರು ಈ ಆರೋಗ್ಯ ಕೇಂದ್ರವನ್ನೇ ಅವಲಂಬಿಸಿರುವುದರಿಂದ ಕೇಂದ್ರದಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸುವುದು ತುರ್ತು ಅಗತ್ಯವಾಗಿದೆ. ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಜ್ಞರು, ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞರು ಸೇರಿದಂತೆ ಅಗತ್ಯ ತಜ್ಞ ವೈದ್ಯರನ್ನು ನೇಮಕ ಮಾಡಬೇಕು, ತುರ್ತು ಚಿಕಿತ್ಸಾ ಸೇವೆಗಳನ್ನು ಬಲಪಡಿಸಬೇಕು ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ವಿವಿಧ ವೈದ್ಯಕೀಯ ಪರೀಕ್ಷೆಗಳು ಲಭ್ಯವಾಗುವಂತೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇದಲ್ಲದೆ, ಆಸ್ಪತ್ರೆಯಲ್ಲಿ ಅಗತ್ಯ ಸಿಬ್ಬಂದಿ ಕೊರತೆಯನ್ನು ನೀಗಿಸಿ, ವೈದ್ಯಕೀಯ ಸೇವೆಗಳನ್ನು ಸಮರ್ಪಕವಾಗಿ ಒದಗಿಸುವ ವ್ಯವಸ್ಥೆ ಮಾಡಬೇಕು. ಶಸ್ತ್ರಚಿಕಿತ್ಸೆ ಸೇರಿದಂತೆ ಅಗತ್ಯ ಚಿಕಿತ್ಸಾ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸಬೇಕು. ಸಾರ್ವಜನಿಕರಿಗೆ ದೂರದ ಆಸ್ಪತ್ರೆಗಳಿಗೆ ತೆರಳುವ ಅನಿವಾರ್ಯತೆ ಉಂಟಾಗದಂತೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರವನ್ನು ಸಮಗ್ರ ಸಮುದಾಯ ಆರೋಗ್ಯ ಸೇವಾ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು ಹಾಗೂ ನಾಡಿನೆಲ್ಲೆಡೆ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ತಜ್ಞ ವೈದ್ಯರ ನೇಮಕ ಹಾಗೂ ವೈದ್ಯಕೀಯ ಸೌಲಭ್ಯಗಳ ಹೆಚ್ಚಳಕ್ಕೆ ಸರಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಮೊಹಮ್ಮದ್ ತೌಸಿಫ್ ಯು.ಟಿ. ಅಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಅರಫಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ಶಫೀಕ್ ಅರಫಾ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here