ನಾಳೆ (ಆ.21) ಬೆಟ್ಟಂಪಾಡಿ ದೇವಾಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ

0

ನಿಡ್ಪಳ್ಳಿ: ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಅಮ್ಮನವರ ಕೃಪಾಶೀರ್ವಾದಗಳೊಂದಿಗೆ ಪುರೋಹಿತರಾದ ಕಕ್ಕೂರು ರಾಧಾಕೃಷ್ಣ ಭಟ್ ಇವರ ಪೌರೋಹಿತ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಪುತ್ತೂರು ಬೆಟ್ಟಂಪಾಡಿ ವಲಯದಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ರೆಂಜ, ಚೂರಿಪದವು, ಕಕ್ಕೂರು ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಆ.21 ರಂದು ಶ್ರೀ ಮಹಾಲಿಂಗೇಶ್ವರ ದೇವಾಲಯ ಶ್ರೀ ಕ್ಷೇತ್ರ ಬೆಟ್ಟಂಪಾಡಿ ಇಲ್ಲಿಯ ಬಿಲ್ವಶ್ರೀ ಸಭಾಭವನದಲ್ಲಿ ನಡೆಯಲಿದೆ.

  ಬೆಳಿಗ್ಗೆ ಗಂಟೆ 8ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಆರಂಭವಾಗಿ ಗಂಟೆ 11ಕ್ಕೆ ಮಹಾಮಂಗಳಾರತಿ ನಡೆಯಲಿದೆ. ನಂತರ ಧಾರ್ಮಿಕ ಸಭೆ ಒಕ್ಕೂಟಗಳ ಪದಗ್ರಹಣ ನಡೆದು ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿರುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here