







ಪುತ್ತೂರು:ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಪುತ್ತೂರು ಮತ ಬಿಲ್ಲವ ಮಹಿಳಾ ವೇದಿಕೆ ಪುತ್ತೂರು ಇದರ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ಆ.21 ರಂದು ಬಪ್ಪಳಿಗೆ-ಬೈಪಾಸ್ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಂಗಣದಲ್ಲಿ ನೆರವೇರಲಿದೆ.


ಅರ್ಚಕ ನವೀನ್ ಶಾಂತಿ ಅಡ್ಯಾಲು ಅಜಿಲಮೊಗರುರವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಲಿದೆ. ಬೆಳಿಗ್ಗೆ ಮಹಿಳಾ ವೇದಿಕೆಯ ಸದಸ್ಯರಿಂದ ಭಜನೆ ಬಳಿಕ ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಜರಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ವರಮಹಾಲಕ್ಷ್ಮೀ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಹಾಗೂ ಪದಾಧಿಕಾರಿಗಳು, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಕುಮಾರ್ ಪಡ್ಪು ಹಾಗೂ ಸದಸ್ಯರು, ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಪುಷ್ಪಾವತಿ ಕೇಕುಡೆ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













