ಎಡನೀರು ಚಾತುರ್ಮಾಸ್ಯ ಸಾಂಸ್ಕೃತಿಕ ವೇದಿಕೆಯಲ್ಲಿ ವಿಶೇಷ : ತಾಳಮದ್ದಳೆಯಲ್ಲಿ ಶಿಕ್ಷಣ ದಿನಾಚರಣೆ ಪ್ರಯುಕ್ತ ರಾಧಾಕೃಷ್ಣ ಕಲ್ಚಾರ್ ಅವರಿಗೆ ಸನ್ಮಾನ

0

ಪುತ್ತೂರು: ಯಕ್ಷಮಿತ್ರರು ಬೆಂಗಳೂರು ಟ್ರಸ್ಟ್ ವತಿಯಿಂದ ಶಿಕ್ಷಣ ದಿನಾಚರಣೆ ಪ್ರಯುಕ್ತ ಸೆ.5ರಂದು ಯಕ್ಷಗಾನ ತಾಳಮದ್ದಳೆ ಕ್ಷೇತ್ರದ ಹಿರಿಯ ಕಲಾವಿದ, ಉಪನ್ಯಾಸಕ ಹಾಗೂ ಅಂಕಣಕಾರ ರಾಧಾಕೃಷ್ಣ ಕಲ್ಚಾರ್ ಅವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಯಕ್ಷಮಿತ್ರ ಬೆಂಗಳೂರು ಟ್ರಸ್ಟ್ ಕಾರ್ಯದರ್ಶಿ ಶ್ಯಾಮ ಸೂರ್ಯ ಎಂ. ತಿಳಿಸಿದ್ದಾರೆ.


ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ 6ನೇ ಚಾತುರ್ಮಾಸ್ಯ ವ್ರತಾಚರಣೆಯ ಅಂಗವಾಗಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಯಲ್ಲಿ ಸೆ.5ರಂದು ಸಂಜೆ ಗಂಟೆ 6ಕ್ಕೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮುಖ ಅತಿಥಿಯಾಗಿ ಪ್ರಮೋದ್ ಮಧ್ವರಾಜ್ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಕನ್ನಡ ಯಕ್ಷಗಾನ ತಾಳಮದ್ದಳೆಯೊಂದಿಗೆ ಶಿಕ್ಷಕರ ಸನ್ಮಾನ ಕಾರ್ಯಕ್ರಮಗಳು ನಡೆಯಲಿವೆ.

LEAVE A REPLY

Please enter your comment!
Please enter your name here