







ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆ.೨೨ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.


ಬೆಳಿಗ್ಗೆ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿವರ್ಯರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವೇದಮೂರ್ತಿ ಶಿಬರ ಶ್ರೀವತ್ಸ ಕೆದಿಲಾಯರ ಪೌರೋಹಿತ್ಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ದೇವಸ್ಥಾನದ ಆಡಳಿತ ಸಮಿತಿಯ ಪ್ರಕಟಣೆ ತಿಳಿಸಿದೆ.













