ವಿದ್ಯಾಭಾರತಿ ಕ್ರೀಡಾಕೂಟ : ರಾಮಕುಂಜ ಆ.ಮಾ.ಶಾಲಾ ಖೋ ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

0

ರಾಮಕುಂಜ: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚ ಇಲ್ಲಿ ಆ.೭ರಂದು ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಶ್ರೀ ರಾಮಕುಂಜೆಶ್ವರ ಆಂಗ್ಲ ಮಾಧ್ಯಮ ಶಾಲೆಯ ಬಾಲ ವರ್ಗದ ಬಾಲಕರ ಮತ್ತು ಕಿಶೋರವರ್ಗದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಚಾಮರಾಜನಗರದಲ್ಲಿ ನಡೆಯುವ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟಕ್ಕೆ ಆಯ್ಕೆಯಾಗಿದೆ.


ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ., ದಿವ್ಯಾ ಪಿ.ಎನ್., ರಾಘವ ಹಾಗೂ ಕಿಶನ್ ರಾಜ್ ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here