






ಕಡಬ: ಬಿಳಿನೆಲೆ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ 16ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿದವು. ವರಮಹಾಲಕ್ಷ್ಮಿ ದೇವಿಯ ಆರಾಧನೆ, ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮಗಳು ಜರುಗಿದವು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಗೆ ಪೂಜೆ ಸಲ್ಲಿಸಿ, ವ್ರತಾಚರಣೆ ನೆರವೇರಿಸಿದರು.
ಪೂಜಾ ಕಾರ್ಯಕ್ರಮದಲ್ಲಿ ಬಿಳಿನೆಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು. ಕಾರ್ಯಕ್ರಮದ ಅಂಗವಾಗಿ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು.
ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.












