ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘ : 20ನೇ ಬಾರಿಗೆ ಎಸ್.ಸಿ. ಡಿ.ಸಿ.ಸಿ. ಬ್ಯಾಂಕ್‌ನ `ಸಾಧನಾ’ ಪ್ರಶಸ್ತಿ – ಇಂದು ಪ್ರಶಸ್ತಿ ಪ್ರದಾನ

0

ಉಪ್ಪಿನಂಗಡಿ: ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘವು ಸಾಲ ವಸೂಲಾತಿಯಲ್ಲಿ ಶೇ.100 ಸಾಧನೆ ಮಾಡಿದ್ದು, ಸತತ ೨೦ನೇ ಬಾರಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ `ಸಾಧನಾ’ ಪ್ರಶಸ್ತಿಗೆ ಆಯ್ಕೆಯಾಗಿದೆ.


ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘವು 2006ರಲ್ಲಿ ಕಡೇಶ್ವಾಲ್ಯ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ವಿಭಜನೆಗೊಂಡು ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘವು 20ನೇ ಬಾರಿಗೆ ಶೇ.100 ಸಾಲ ವಸೂಲಾತಿಯ ಸಾಧನೆಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಾಧನಾ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಆ.22ರಂದು ಮಂಗಳೂರಿನಲ್ಲಿ ನಡೆಯಲಿರುವ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್. ತೋಯಜಾಕ್ಷ ಶೆಟ್ಟಿಯವರು ತಿಳಿಸಿದ್ದಾರೆ.


ಸಂಘದ ಕಾರ್ಯ ಸಾಧನೆ:
ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 20 ವರ್ಷಗಳ ಇತಿಹಾಸವಿದ್ದು, ಎರಡು ಗ್ರಾಮಗಳ ಕಾರ್ಯವ್ಯಾಪ್ತಿ ಹೊಂದಿರುವ ಇದು ಪೆರ್ನೆಯಲ್ಲಿ ಕಚೇರಿ ಹೊಂದಿದೆ. ಸಂಘವು 2025-26ನೇ ಆರ್ಥಿಕ ವರ್ಷಾಂತ್ಯಕ್ಕೆ ಅತ್ಯುತ್ತಮ ವ್ಯವಹಾರದೊಂದಿಗೆ ಎಲ್ಲಾ ವಿಭಾಗದಲ್ಲೂ ಪ್ರಗತಿಯನ್ನು ಸಾಧಿಸಿ ಉತ್ತಮ ಲಾಭ ಗಳಿಸಿದೆ. ವರ್ಷಾಂತ್ಯಕ್ಕೆ ಸಂಘದಲ್ಲಿ 1912 ಎ ತರಗತಿ ಸದಸ್ಯರಿದ್ದು, ರೂ. 178.63ಕೋ. ವ್ಯವಹಾರ ನಡೆಸಿ 72.98 ಲಕ್ಷ ಲಾಭ ಗಳಿಸಿರುತ್ತದೆ.


2025-26ರಲ್ಲಿ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಅವಿರೋಧ ಆಯ್ಕೆ ನಡೆದಿದ್ದು, ಎಸ್. ತೋಯಜಾಕ್ಷ ಶೆಟ್ಟಿ ಇವರು ಸತತ 21 ವರ್ಷದಿಂದ ಅಧ್ಯಕ್ಷರಾಗಿ ಆಯ್ಕೆಗೊಂಡಿರುತ್ತಾರೆ. ಉಪಾಧ್ಯಕ್ಷರಾಗಿ ತನಿಯಪ್ಪ ಪೂಜಾರಿ, ನಿರ್ದೇಶಕರಾಗಿ ಡಾ. ರಾಜಗೋಪಾಲ್ ಶರ್ಮಾ, ನೀಲಪ್ಪ ಗೌಡ, ಲಕ್ಷ್ಮಣ ನಾಯ್ಕ, ಜಯಲಕ್ಷ್ಮೀ, ರೇವತಿ, ಸುನೀಲ್ ನೆಲ್ಸನ್ ಪಿಂಟೋ, ಜಾರಪ್ಪ ಗೌಡ, ಅಬ್ದುಲ್ ಲತೀಫ್, ಬೇಬಿ, ಶಾಂತಾ, ವಲಯ ಮೇಲ್ವಿಚಾರಕರಾಗಿ ಯೊಗೀಶ್ ಎಚ್., ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಪುಷ್ಪಾ ಡಿ. ಹಾಗೂ ಸಿಬ್ಬಂದಿ ವರ್ಗ ಕಾರ್ಯನಿರ್ವಹಿಸುತ್ತಿರುತ್ತಾರೆ.

LEAVE A REPLY

Please enter your comment!
Please enter your name here