






ಪುತ್ತೂರು: ದರ್ಬೆ ಅಂಗಡಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಗಾಯಗೊಂಡಿರುವ ಸದಾಶಿವ ಪೈ ಅವರ ಪತ್ನಿಯ ಆರೋಗ್ಯ ವಿಚಾರಣೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರು ಆಸ್ಪತ್ರೆಗೆ ಭೇಟಿ ನೀಡಿದರು.


ಗಾಯಾಳುವಿನ ಆರೋಗ್ಯ ವಿಚಾರಿಸಿದ ಬಳಿಕ ಡಿವೈಎಸ್ಪಿ ಅವರನ್ನು ಭೇಟಿಯಾಗಿ ಘಟನೆ ಕುರಿತು ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.













