ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆಸತತ 13ನೇ ಬಾರಿಗೆ ಎಸ್‌ಸಿಡಿಸಿಸಿ ಬ್ಯಾಂಕಿನ ಸಾಧನಾ ಪ್ರಶಸ್ತಿ

0

ಕಾವು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸತತ 13ನೇ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು. 2025-26ನೇ ಆರ್ಥಿಕ ವರ್ಷಾಂತ್ಯಕ್ಕೆ ಸಾಲ ವಸೂಲಾತಿ ಗುರಿಯಲ್ಲಿ ಶೇ.100 ಸಾಧನೆ ಮಾಡಿದ ತಾಲೂಕಿನ ಏಕೈಕ ಸಹಕಾರಿ ಸಂಘವಾದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಆ.22ರಂದು ಮಂಗಳೂರಿನಲ್ಲಿ ನಡೆದ ಎಸ್‌ಸಿಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್‌ರವರು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿರವರಿಗೆ ಶಾಲು ಹೊದಿಸಿ, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾ‌ರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ ಬಳಜ್ಜ, ಕಾವು ಸಹಕಾರ ಸಂಘದ ನಿರ್ದೇಶಕರಾದ ಲೋಕೇಶ್ ಚಾಕೋಟೆ, ಶಿವರಾಮ ಪಿ,ನಹುಷ ಭಟ್ ಪಳನೀರು, ಲೋಹಿತ್ ಅಮ್ಚಿನಡ್ಕರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here