ನಾಳೆ (ಆ.23) :ವೀರ ಮಾಚಿದೇವ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

0

ಪುತ್ತೂರು: ವೀರ ಮಾಚಿದೇವ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ ಎಪಿಎಂಸಿ ರಸ್ತೆಯಲ್ಲಿರುವ ಆದರ್ಶ ಆಸ್ಪತ್ರೆ ಮುಂಭಾಗದಲ್ಲಿರುವ ತ್ರಿನೇತ್ರ ಕಾಂಪ್ಲೆಕ್ಸ್‌ನ ಮೊದಲ ಮಹಡಿಗೆ (ಸ್ವಂತ ನಿವೇಶನ) ಸ್ಥಳಾಂತರಗೊಂಡು ಆ.23ರಂದು ಶುಭಾರಂಭಗೊಳ್ಳಲಿದೆ.


ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರು ಕಚೇರಿ ಉದ್ಘಾಟಿಸಲಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರು ಗಣಕೀಕೃತ ಯಂತ್ರ ಉದ್ಘಾಟಿಸಲಿದ್ದಾರೆ. ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಅವರು ನಗದು ಪತ್ರ ವಿತರಣೆ ಮಾಡಲಿದ್ದು, ಎಂಎಲ್‌ಸಿ ಆರ್.ರಘು ಕೌಟಿಲ್ಯ ಅವರು ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ.


ಸಂಘದ ಅಧ್ಯಕ್ಷ ಇಂದುಶೇಖರ್ ಪಿ.ಬಿ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲೆ ಸಹಕಾರ ಸಂಘದ ಉಪ ನಿಬಂಧಕ ಹೆಚ್.ಎನ್.ರಮೇಶ್, ಸಹಾಯಕ ನಿಬಂಧಕ ರಘು ಎಸ್.ಎಂ., ಆದರ್ಶ ಆಸ್ಪತ್ರೆ ವೈದ್ಯ ಡಾ.ಎಂ.ಕೆ.ಪ್ರಸಾದ್, ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ಗುರು ಮಾಚಿದೇವ ವಿವಿಧೋದ್ದೇಶ ಸಹಕಾರ ಸಂಘ ಉಡುಪಿ ಅಧ್ಯಕ್ಷ ಆನಂದ ಮಡಿವಾಳ, ಮಹಾವೀರ ಆಸ್ಪತ್ರೆಯ ವೈದ್ಯ ಡಾ.ಸುರೇಶ್ ಪುತ್ತೂರಾಯ, ಬಿಜೆಪಿಯ ವ್ಯಾಪಾರ ಪ್ರಕೋಷ್ಠದ ಸಂಚಾಲಕ ಉಜ್ವಲ್ ಪ್ರಭು, ಉದ್ಯಮಿ ವೆಲೇರಿಯನ್ ಡಯಾಸ್, ದ.ಕ. ಜಿಲ್ಲಾ ಮಡಿವಾಳರ ಸಂಘದ ಮಂಗಳೂರು ಅಧ್ಯಕ್ಷ ಮೋಹನ್ ಅಳಪೆ ಅವರು ಆಗಮಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ. ಸಂಘವು ಕಲ್ಲಡ್ಕ ಮತ್ತು ಉಜಿರೆಯಲ್ಲಿ ಶಾಖೆಯನ್ನು ಹೊಂದಿದೆ.

LEAVE A REPLY

Please enter your comment!
Please enter your name here