







ಪುತ್ತೂರು: ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘಕ್ಕೆ ಸತತ 7ನೇ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.
2025-26ನೇ ಆರ್ಥಿಕ ವರ್ಷಾಂತ್ಯಕ್ಕೆ ಸಾಲ ವಸೂಲಾತಿ, ವ್ಯವಹಾರದಲ್ಲಿ ಉತ್ತಮ ಸಾಧನೆ ಮಾಡಿದ ಸಂಘವನ್ನು ಆ.22ರಂದು ಮಂಗಳೂರಿನಲ್ಲಿ ನಡೆದ ಎಸ್‌ಸಿಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್‌ರವರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ ಬಳಜ್ಜ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮೋಹನ್ ಗೌಡ ಇಡ್ಯಡ್ಕ, ಜಿನ್ನಪ್ಪ ಗೌಡ ಮಲುವೇಳು, ರಾಮಕೃಷ್ಣ ಗೌಡ ಕರ್ಮಲ, ಸತೀಶ್ ಪಾಂಬಾರು, ಸುಪ್ರಿತಾ ರವಿಚಂದ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಧರ್ ಗೌಡ ಕಣಜಾಲು ಮತ್ತಿತರರು ಉಪಸ್ಥಿತರಿದ್ದರು.












