







ಕಾಣಿಯೂರು: ಶತಮಾನೋತ್ಸವ ಆಚರಿಸಿಕೊಂಡ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾಣಿಯೂರು 2025-26ನೇ ಸಾಲಿನ ಶೇ 100 ಸಾಲ ವಸೂಲಾತಿ ಸಾಧನೆಗಾಗಿ 12ನೇ ಬಾರಿ ಪ್ರತಿಷ್ಠಿತ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಿದೆ.


ಆ.22ರಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರಿನಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕ್ ನ ಅಧ್ಯಕ್ಷ ಡಾ| ಎಂ. ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಗೌಡ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.



ಈ ಸಂದರ್ಭದಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ಧೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್. ಬಿ ಜಯರಾಮ ರೈ, ಕುಶಾಲಪ್ಪ ಗೌಡ ಪೂವಾಜೆ, ಎಸ್.ಎನ್ ಮನ್ಮಥ, ದ.ಕ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಫದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ನಿರ್ದೇಶಕರಾದ ಅನಂತಕುಮಾರ್ ಬೈಲಂಗಡಿ, ರಮೇಶ್ ಉಪ್ಪಡ್ಕ, ಸುಂದರ ದೇವಸ್ಯ, ಪರಮೇಶ್ವರ ಅನಿಲ, ಲೋಕೇಶ್ ಆತಾಜೆ, ವೀಣಾ ಅಂಬುಲ ಉಪಸ್ಥಿತರಿದ್ದರು.










