ದರ್ಬೆ ಪ್ರಕರಣ : ಗಾಯಾಳುಗಳನ್ನು ಭೇಟಿ ಮಾಡಿದ ಶಾಸಕ ಅಶೋಕ್ ಕುಮಾರ್ ರೈ

0

ಪುತ್ತೂರು: ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಶಾಸಕ ಅಶೋಕ್ ಕುಮಾರ್ ರೈ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಗಾಯಾಳು ಮುಬಾರಿಶ್ ಮೆಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಶಾಸಕ ಅಶೋಕ್ ರೈ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿರುವ ಸಂಜನಾ ಪೈ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ತಾಲೂಕು ಗ್ಯಾರಂಟಿ ಅಮಿತಿ ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಪೆರ್ನೆ, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಪಕ್ಷದ ಮುಖಢಂರಾದ ಜೋಕಿಂ ಡಿಸೋಜಾ, ರಾಕೇಶ್ ರೈ ಕುದ್ಕಾಡಿ,ಬಶೀರ್ ಪರ್ಲಡ್ಕ, ಮೋನು ಬಪ್ಪಳಿಗೆ,ವಾಮನ್ ಪೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here