ಬೊಬ್ಬೆಕೇರಿ ಶಾಲೆಯಲ್ಲಿ ‘ಹಸಿರ ಸಿರಿ’ ಇಕೋ ಕ್ಲಬ್ ನಿಂದ ಪರಿಸರ ಸಂರಕ್ಷಣೆ ಮಾಹಿತಿ ಕಾರ್ಯಾಗಾರ

0

ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಹಸಿರ ಸಿರಿ’ ಇಕೋ ಕ್ಲಬ್ ವತಿಯಿಂದ ಪರಿಸರ ಸಂರಕ್ಷಣೆ ಮಾಹಿತಿ ಕಾರ್ಯಾಗಾರವು ಆ 22ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ನಿವೃತ್ತ ಮುಖ್ಯಶಿಕ್ಷಕ ರಾಮಚಂದ್ರ ಗೌಡ ಪೆರಿಂಜ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು. ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ಅರಿತುಕೊಂಡು ಕಾರ್ಯಪ್ರವೃತ್ತರಾದಾಗ ಮಾತ್ರ ನಾವು ಸುಂದರ ಮತ್ತು ಆರೋಗ್ಯಕರ ಭವಿಷ್ಯವನ್ನು ನಿರ್ಮಿಸಲು ಸಾಧ್ಯ. ಪರಿಸರ ಪ್ರಜ್ಞೆಯನ್ನು ಮೂಡಿಸುವ ಮತ್ತು ದೈನಂದಿನ ಜೀವನದಲ್ಲಿ ಪರಿಸರಸ್ನೇಹಿ ಶೈಲಿಯನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುವ ಇಂತಹ ಕಾರ್ಯಕ್ರಮ ಅನಿವಾರ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಸುನೀತಾ ಗಣೇಶ್ ವಹಿಸಿದ್ದರು. ಇಕೋ ಕ್ಲಬ್ ನ ನೋಡೆಲ್ ಶಿಕ್ಷಕಿ ಗೀತಾ ಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಾಲಾ ಮುಖ್ಯಗುರು ಶಶಿಕಲಾ ಸ್ವಾಗತಿಸಿ, ಶಿಕ್ಷಕ ಜನಾರ್ದನ ಹೇಮಳ ವಂದಿಸಿದರು. ಶಿಕ್ಷಕಿ ಶೋಭಿತ ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ತಂಬಾಕಿನ ದುಷ್ಪರಿಣಾಮಗಳ ಕುರಿತು ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿ ಸುಶ್ಮಿತಾ ಬಹುಮಾನ ವಿಜೇತರ ವಿವರ ವಾಚಿಸಿದರು.

LEAVE A REPLY

Please enter your comment!
Please enter your name here