ಶೇ.100 ಸಾಲ ವಸೂಲಾತಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ

0

ನೆಲ್ಯಾಡಿ : ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಸರ್ವತೋಮುಖ ಪ್ರಗತಿ ಸಾಧನೆಗಾಗಿ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ನಿರಂತರ 10 ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯುತ್ತಾ ಬಂದಿದೆ.2020ರಲ್ಲಿ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸಹಕಾರಿ ಸಪ್ತಾಹದಲ್ಲಿ ಜಿಲ್ಲಾ ಮಟ್ಟದಲ್ಲೇ ಉತ್ತಮ ಸಹಕಾರಿ ಸಂಘ ಎಂಬ ಪ್ರಶಸ್ತಿ ಪಡೆದಿದ್ದ ಸಂಘ, ಕಳೆದ ಎರಡು ವರ್ಷಗಳಿಂದ ಶೇ.100 ಸಾಲ ವಸೂಲಾತಿ ಮಾಡಿದ್ದಕ್ಕಾಗಿ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಪ್ರಶಸ್ತಿ ಪಡೆದಿದೆ. ಪ್ರಸಕ್ತ ವರ್ಷವೂ ಶೇ.100 ಸಾಲ ವಸೂಲಾತಿ ಮಾಡಿದ್ದಕ್ಕಾಗಿ ಆ.22ರಂದು ನಡೆದ ದ.ಕ. ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಸಂಘದ ಪರವಾಗಿ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಕೆ.ಎಂ., ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು, ನಿರ್ದೇಶಕರಾದ ಉಷಾ ಅಂಚನ್, ಭಾಸ್ಕರ ರೈ, ಬಾಬು ನಾಯ್ಕ, ಜಿನ್ನಪ್ಪ ಗೌಡ, ಸುಧಾಕರ ಗೌಡ, ಜನಾರ್ದನ ಗೌಡ ಬರೆಮೇಲು ಪ್ರಶಸ್ತಿ ಸ್ವೀಕರಿಸಿದರು.

ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ಬಾಲ್ಯೋಟ್ಟು, ನಿರ್ದೇಶಕರಾದ ಜಯರಾಮ್ ರೈ, ದೇವಿಪ್ರಸಾದ್ ಶೆಟ್ಟಿ, ಕುಶಾಲಪ್ಪ ಗೌಡ ಪೂವಜೆ ಮತ್ತಿತರರು ಪ್ರಶಸ್ತಿ ಪ್ರದಾನ ಮಾಡಿದರು.


LEAVE A REPLY

Please enter your comment!
Please enter your name here