






ನೆಲ್ಯಾಡಿ: ಇಚ್ಲಂಪಾಡಿ-ನೇರ್ಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಶಾಲೆಯ ಹಳೆ ವಿದ್ಯಾರ್ಥಿ ಆದಿರಾ ಉದಯಕುಮಾರ್ ಕುಂಞಿಮಾರು ಅವರು ಶಾಲೆಯ ಮೂಲಸೌಕರ್ಯ ಮತ್ತು ಭದ್ರತೆಯ ಅಗತ್ಯವನ್ನು ಮನಗಂಡು ಸ್ವಯಂಪ್ರೇರಿತರಾಗಿ ನೂತನ ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಿ ಅಳವಡಿಸಿಕೊಟ್ಟಿದ್ದಾರೆ.
ಶಾಲೆಯ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಿಸಿಟಿವಿ ಉಪಕರಣಗಳನ್ನು ಶಾಲಾ ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.













