







ಸುಳ್ಯ: ಸುಳ್ಯದ ಗ್ರೀನ್ ವ್ಯೂ ಕ್ರೀಡಾಂಗಣದಲ್ಲಿ ಇಂಡಿಪೆಂಡೆನ್ಸ್ ಕಪ್ ಸೀಸನ್-2 ವಾಲಿಬಾಲ್ ಪಂದ್ಯಕೂಟಕ್ಕೆ ಅದ್ದೂರಿ ಚಾಲನೆ ನೀಡಲಾಯಿತು.


ಮುಂಗಾರು ವಾಲಿಬಾಲ್ ಅಕಾಡೆಮಿ, ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಮತ್ತು ಮಲೆನಾಡು ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಪಂದ್ಯಕೂಟ ಆಯೋಜಿಸಲಾಗಿದೆ.




ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಪಂದ್ಯಕೂಟಕ್ಕೆ ಚಾಲನೆ ನೀಡಿದರು. ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ ಅಧ್ಯಕ್ಷತೆ ವಹಿಸಿ ಮಾತನಾಡಿದರು.ದ.ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಉಪಾಧ್ಯಕ್ಷ ಎಸ್. ಸಂಶುದ್ದೀನ್, ಖಜಾಂಚಿ ಇಬ್ರಾಹಿಂ ಗೂನಡ್ಕ, ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ವರ್ತಕರ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಜನತಾ, ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ ಅಧ್ಯಕ್ಷ ಅಬ್ದುಲ್ ಮಜೀದ್ ಜನತಾ, ರೋಟರಿ ಕ್ಲಬ್ ಅಧ್ಯಕ್ಷೆ ಲತಾ ಮಧುಸೂದನ್ ಮತ್ತಿತರರು ಉಪಸ್ಥಿತರಿದ್ದರು.ಮಿರಾಜ್ ಗುರೂಪು ಸ್ವಾಗತಿಸಿ, ರಿಯಾಝ್ ಕಟ್ಟೆಕ್ಕಾರ್ಸ್ ವಂದಿಸಿದರು.










