ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಉದ್ಯೋಗಸ್ಥರ ಗೃಹ ನಿರ್ಮಾಣ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು: ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಉದ್ಯೋಗಸ್ಥರ ಗೃಹ ನಿರ್ಮಾಣ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಚಾಕಲೇಟ್ ಫ್ಯಾಕ್ಟರಿ ಆವರಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ವಿನೋದ್ ಶೆಟ್ಟಿ ಅವರು ವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸದಸ್ಯರ ನಿರಂತರ ಸಹಕಾರದಿಂದ ಸಂಘವು ವರ್ಷದಿಂದ ವರ್ಷಕ್ಕೆ ಉತ್ತಮ ಪ್ರಗತಿ ಸಾಧಿಸುತ್ತಿದ್ದು, 2025-26ನೇ ಸಾಲಿನಲ್ಲಿ ₹29 ಲಕ್ಷ ಲಾಭ ಗಳಿಸಿದೆ ಎಂದು ತಿಳಿಸಿದರು. ಸದಸ್ಯರಿಗೆ 17% ಡಿವಿಡೆಂಡ್ ಹಾಗೂ 2% ನಿವೃತ್ತಿ ಲಾಭ ನಿಧಿ ನೀಡಲಾಗುತ್ತಿದೆ ಎಂದು ಹೇಳಿದರು.

ಸಭೆಯಲ್ಲಿ SSLC ಹಾಗೂ PUC ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಸದಸ್ಯರ ಮಕ್ಕಳನ್ನು ಅಭಿನಂದಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಸಂಘದ ವಿವಿಧ ಕಾರ್ಯಚಟುವಟಿಕೆಗಳು ಹಾಗೂ ಸಾಧನೆಗಳ ಕುರಿತು ಸದಸ್ಯರಿಗೆ ಮಾಹಿತಿ ನೀಡಲಾಯಿತು. ಸಭೆಯಲ್ಲಿ ಸಂಘದ ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಸುಜಯ ಅವರು ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷರಾದ ಚೇತನ ವಂದಿಸಿದರು.

LEAVE A REPLY

Please enter your comment!
Please enter your name here