






ಆಲಂಕಾರು: ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು ಮಂಗಳೂರಿನಲ್ಲಿ ನಡೆದ ಎಸ್‌ಸಿಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.


ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್ ರಾಜೇಂದ್ರ ಕುಮಾರ್‌ರವರು ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಮಾಧವ ಪೂಜಾರಿ ಕಯ್ಯಪ್ಪೆ ,ಕಾರ್ಯದರ್ಶಿ ಅನಿತಾ ರವರಿಗೆ ಶಾಲು ಹೊದಿಸಿ, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು.



ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಗೊಟ್ಟು, ಎಸ್.ಬಿ ಜಯರಾಮ ರೈ ಬಳಜ್ಜ, ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ ಮುರಳೀಧರ ರೈ ಮನವಳಿಕೆ,ಮಾಜಿ ಅದ್ಯಕ್ಷರು ಹಾಗೂ ನಿರ್ದೇಶಕರಾದ ರಾಧಾಕೃಷ್ಣ ರೈ ಮನವಳಿಕೆ ಉಪಸ್ಥಿತರಿದ್ದರು










