ಪೆರಿಯಶಾಂತಿ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ

0

ನೆಲ್ಯಾಡಿ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಎಂಬಲ್ಲಿ ಆ.23ರಂದು ಮುಂಜಾನೆ ಸಂಭವಿಸಿದೆ.


ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಪೆರಿಯಶಾಂತಿ ಬಳಿ ಹೆದ್ದಾರಿಯ ಮಧ್ಯಭಾಗದಲ್ಲಿ ತಾತ್ಕಾಲಿಕವಾಗಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಎರಡು ವಿದ್ಯುತ್ ಕಂಬಗಳು ತುಂಡಾಗಿ ಹೆದ್ದಾರಿಗೆ ಉರುಳಿ ಬಿದ್ದಿದ್ದು, ಇನ್ನೂ ಎರಡು ಕಂಬಗಳು ವಾಲಿದ ಸ್ಥಿತಿಯಲ್ಲಿ ನಿಂತಿವೆ. ವಿದ್ಯುತ್ ತಂತಿಗಳು ಹೆದ್ದಾರಿಯಲ್ಲೇ ಬಿದ್ದ ಪರಿಣಾಮ ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದು, ಈ ಪೈಕಿ ಓರ್ವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here