ನಾಳೆ(ಆ.25) ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು : ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯು ಆ. 25ರಂದು ಮಂಗಳವಾರ ಪೂರ್ವಾಹ್ನ 10.30ಕ್ಕೆಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ರೈ ಕೈಕಾರರವರ ಅಧ್ಯಕ್ಷತೆಯಲ್ಲಿ ಕುಂಬ್ರದ ನವೋದಯ ರೈತ ಸಭಾಭವನದಲ್ಲಿ ನಡೆಯಲಿದೆ.


ಸಂಘದ ಸರ್ವ ಸದಸ್ಯರು ಸಭೆಗೆ ಹಾಜರಾಗಿ ವಾರ್ಷಿಕ ವರದಿ, ಲೆಕ್ಕಪತ್ರಗಳು ಹಾಗೂ ಸಂಘದ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳ ಚರ್ಚೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ. ಸಹಕಾರಿ ಸಂಘದ ಪ್ರಗತಿ, ಸದಸ್ಯರ ಹಿತಾಸಕ್ತಿ ಹಾಗೂ ಭವಿಷ್ಯದ ಕಾರ್ಯಯೋಜನೆಗಳ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆಯಲಿದ್ದು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಭೆಯನ್ನು ಯಶಸ್ವಿಗೊಳಿಸುವಂತೆ ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here