






ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆಯನ್ನು ದಿನಾಂಕ:26-08-2026ರ ಬದಲಾಗಿ ದಿನಾಂಕ:25-08-2026ರಂದು ಘೋಷಣೆ ಮಾಡಲಾಗಿದೆ.


ಈ ಬಗ್ಗೆ ಸರಕಾರದ ಅಧೀನ ಕಾರ್ಯದರ್ಶಿಯವರು ದ.ಕ.ಜಿಲ್ಲಾಧಿಕಾರಿ ಹಾಗೂ ಉಡುಪಿ ಜಿಲ್ಲಾಧಿಕಾರಿಯವರಿಗೆ ಸೂಚಿಸಿದ್ದಾರೆ. ಈದ್ ಮಿಲಾದ್ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ದಿನಾಂಕ:26-08-2026ರ ಬದಲಿಗೆ ದಿನಾಂಕ: 25-08-2026ರಂದು ಸಾರ್ವತ್ರಿಕ ರಜೆ ಘೋಷಿಸಲು ತಮ್ಮ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.













