






ಪುತ್ತೂರು: ಈದ್ ಮಿಲಾದ್ ಹಬ್ಬ ಹಾಗೂ ಮೆರವಣಿಗೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.


ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಪ್ರಮುಖ ರಸ್ತೆಗಳು, ಜಂಕ್ಷನ್ಗಳು ಹಾಗೂ ಮಸೀದಿಗಳ ವ್ಯಾಪ್ತಿಯಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದ್ದು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಭದ್ರತೆ ಒದಗಿಸಲಾಗಿದೆ.



ಪೋಲಿಸ್ ಬಂದೋಬಸ್ತ್ ವಿವರ:
- ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಅಡಿಷನಲ್ ಎಸ್ಪಿ): 01
- ಡಿವೈಎಸ್ಪಿ (DySP): 01
- ಪಿಎಸ್ಐ (PSI): 08
- ಎಎಸ್ಐ (ASI): 10
- ಪೊಲೀಸ್ ಸಿಬ್ಬಂದಿಗಳು: 50
- ಹೆಚ್ಚುವರಿ ಭದ್ರತಾ ಪಡೆಗಳು:
- ಕೆ.ಎಸ್.ಆರ್.ಪಿ (KSRP) ತುಕಡಿ: 05
- ಡಿ.ಎ.ಆರ್ (DAR) ತುಕಡಿ: 03
- ಸ್ಪೆಷಲ್ ಆಕ್ಷನ್ ಫೋರ್ಸ್ (SAF) ತುಕಡಿ: 01
ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸುವಂತೆ ಮತ್ತು ಪೊಲೀಸ್ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.










