ವಿಟ್ಲ: ಈಜಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತ್ಯು

0

ವಿಟ್ಲ: ಈಜಲು ತೆರಳಿದ್ದ ವ್ಯಕ್ತಿಯೋರ್ವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೋಟಿಕೆರೆ ಎಂಬಲ್ಲಿ ಆ.25ರಂದು ಬೆಳಗ್ಗೆ ನಡೆದಿದೆ.

ವಿಟ್ಲ ಕಸಬಾದ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಎಂಬವರ ಪುತ್ರ ಎಸ್ ಸಿ ಡಿಸಿಸಿ ಬ್ಯಾಂಕ್ ಉದ್ಯೋಗಿ ಲಿತಿನ್ (32 ವ.) ಮೃತ ದುರ್ದೈವಿ.

ಬೆಳಗ್ಗಿನ ಜಾವ ಈಜಾಡಲೆಂದು ಕೋಟಿಕೆರೆಗೆ ತೆರಳಿದ್ದ‌ ಅವರು ಅಲ್ಲಿ ಈಜಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿದ್ದರು. ಇದನ್ನು ಕಂಡ ಸ್ಥಳೀಯರು ಕೂಡಲೇ ಅವರನ್ನು ಮೇಲಕ್ಕೆತ್ತಿದರೂ ಆ ವೇಳೆಗಾಗಲೆ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.


ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗುವನ್ನು ಆಗಲಿದ್ದಾರೆ.

LEAVE A REPLY

Please enter your comment!
Please enter your name here