







ಪುತ್ತೂರು:ವೀರಮಂಗಲ ಶ್ರೀಕೃಷ್ಣ ಕಲಾ ಕೇಂದ್ರದ ವತಿಯಿಂದ ಸೆ.6ರಂದು ನಡೆಯಲಿರುವ ಆರನೇ ವರ್ಷದ ಶ್ರೀಕೃಷ್ಣ ಲೀಲೋತ್ಸವದ ಆಮಂತ್ರಣ ಪತ್ರಿಕೆಯು ಆ.21ರಂದು ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ವರಮಹಾಲಕ್ಷ್ಮೀ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತ್ತು.
ದೇವಸ್ಥಾನದ ಅರ್ಚಕ ರಾಧಾಕೃಷ್ಣ ಶಗ್ರಿತ್ತಾಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅತಿಥಿ ದ.ಕ ಜಿಲ್ಲಾ ಸಂಸ್ಕಾರ ಭಾರತೀಯ ಪ್ರಾಂತ ಉಪಾಧ್ಯಕ್ಷೆ ರೂಪಲೇಖ ಹರಿಕೃಷ್ಣ ಪುತ್ತೂರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ನಾರಾಯಣ ರೈ ಹೊಳರಾಡಿ, ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಉಮೇಶ್ ಕೋಡಿಬೈಲು, ಕಾರ್ಯದರ್ಶಿ ಹರ್ಷ ಗುತ್ತು, ಶ್ರೀ ಮಹಾವಿಷ್ಣು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಹರೀಶ್ ಆಚರ್ಯ, ಕೃಷ್ಣ ಕಲಾ ಕೇಂದ್ರದ ಅಧ್ಯಕ್ಷ ಗೋಪಾಲಕೃಷ್ಣ ವೀರಮಂಗಲ, ವೈಷ್ಣವೀ ಮಹಿಳಾ ಮಂಡಲದ ಅಧ್ಯಕ್ಷೆ ಭವಾನಿ ಸುಂದರ ಮೂಲ್ಯ, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.















