






ವಿಟ್ಲ: ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವರನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಗಣೇಶ್ ಬಂಧಿತ ಆರೋಪಿ. 2019ರಲ್ಲಿ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಗಣೇಶ್ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ವಾರಂಟ್ ಜಾರಿ ಮಾಡಿತ್ತು.
ವಿಟ್ಲ ಠಾಣಾ ಸಿಬ್ಬಂದಿಗಳಾದ ಹರೀಶ್ ಹಾಗೂ ರಮೇಶ್ ರವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.












