






ಪುತ್ತೂರು: T.A.P.C.M.S ಸಹಕಾರಿ ಸಂಘ 2025-26ನೇ ಸಾಲಿನಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿರುವುದಕ್ಕೆ ಸತತ 6ನೇ ಬಾರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ಪ್ರಧಾನ ಮಾಡಲಾಯಿತು.


ಸಂಘದ ಅಧ್ಯಕ್ಷ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಳಿಯಪ್ಪ ಗೌಡ ಅವರಿಗೆ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.



ಸಂಘದ ನಿರ್ದೇಶಕರಾದ ಸುಜಾತ ರಂಜನ್ ರೈ, ಮೀನಾಕ್ಷಿ ಮಂಜುನಾಥ ಉಪಸ್ಥಿತರಿದ್ದರು.










