ಪುತ್ತೂರು: ವಿಶ್ವಹಿಂದೂ ಪರಿಷದ್ ನೂತನ ಕಟ್ಟಡ ಕಾಮಗಾರಿಗೆ ಚಾಲನೆ

0

ಪುತ್ತೂರು: ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಘಟಕದ ನೂತನ ಕಟ್ಟಡದ ಕಾಮಗಾರಿ ಪ್ರಾರಂಭೋತ್ಸವದ ಅಂಗವಾಗಿ ಆ.25ರಂದು ಗಣಪತಿ ಹವನ ನಡೆಯಿತು.

ರೋಟರಿ ಬ್ಲಡ್ ಬ್ಯಾಂಕ್ ಸಮೀಪದ ಕಟ್ಟಡ ನಿರ್ಮಾಣ ಹಂತದ ಸ್ಥಳದಲ್ಲಿ ಗಣಪತಿ ಹವನ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುವ ಮೂಲಕ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಪೂಜೆಯಲ್ಲಿ ಭಾಗವಹಿಸಿದರು. ವಿಶ್ವಹಿಂದು ಪರಿಷತ್‌ನ ಕರ್ನಾಟಕ ಪ್ರಾಂತ ಉಪಾಧ್ಯಕ್ಷ ಯು.ಪೂವಪ್ಪ, ಪ್ರಮುಖರಾದ ಶರಣ್ ಪಂಪ್‌ವೆಲ್, ಪುನಿತ್ ಅತ್ತಾವರ, ಮುರಳಿಕೃಷ್ಣ ಹಸಂತಡ್ಕ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here