ಚೆಸ್: ರಾಮಕುಂಜ ಆ.ಮಾ.ಶಾಲೆಯ ರುತ್ವಿ ಎ.ಜೆ. ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರಕಾರಿ ಪ್ರೌಢಶಾಲೆ ಕಬಕ ಇದರ ಆಶ್ರಯದಲ್ಲಿ ಕಬಕ ಸರಕಾರಿ ಪ್ರೌಢಶಾಲೆಯಲ್ಲಿ ಆ.21ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ರುತ್ವಿ ಎ.ಜೆ ತೃತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.


ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ತರಬೇತಿ ನೀಡಿದ್ದಾರೆ. ಈಕೆ ರಾಮಕುಂಜ ನಿವಾಸಿ ಜಯಪ್ರಕಾಶ್ ಮತ್ತು ಲತಾ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here