ಶಾಲಾ ಪ್ರವಾಸಕ್ಕೆ ತೆರಳುವುದಾಗಿ ಹೇಳಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆ

0

ಯುವಕನ ವಿರುದ್ಧ ಪೊಕ್ಸೋ ಪ್ರಕರಣ ದಾಖಲು

ಕಡಬ: ಬಾಲಕಿ ನೀಡಿದ ಹೇಳಿಕೆಯ ಆಧಾರದ ಮೇಲೆ ಪರಿಚಿತ ಯುವಕನ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿರುವ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬರು ಆಗಸ್ಟ್ 20ರಂದು ಬೆಳಗ್ಗೆ ಶಾಲಾ ಪ್ರವಾಸಕ್ಕೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು.ಆದರೆ ಪ್ರವಾಸ ಮುಗಿದರೂ ಬಾಲಕಿ ಮನೆಗೆ ವಾಪಸ್ ಬಾರದಿದ್ದಾಗ ಆತಂಕಗೊಂಡ ಆಕೆಯ ತಾಯಿ ಆಗಸ್ಟ್ 21ರಂದು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ದೂರು ದಾಖಲಿಸಿಕೊಂಡ ಪೊಲೀಸರು ಬಾಲಕಿಯ ಶೋಧಕಾರ್ಯಕ್ಕೆ ತಕ್ಷಣವೇ ವಿಶೇಷ ತಂಡವನ್ನು ರಚಿಸಿ ಕಾರ್ಯಾಚರಣೆ ಆರಂಭಿಸಿದ್ದರು.

ಚನ್ನರಾಯಪಟ್ಟಣದಲ್ಲಿ ಪತ್ತೆ: ಪೊಲೀಸ್ ತಂಡವು ಮೊಬೈಲ್ ಲೊಕೇಶನ್ ಹಾಗೂ ಖಚಿತ ಸುಳಿವುಗಳನ್ನು ಆಧರಿಸಿ ನಡೆಸಿದ ತನಿಖೆಯಾಗಿ , ಆಗಸ್ಟ್ 23ರಂದು ಮಧ್ಯಾಹ್ನ ಸುಮಾರು 1 ಗಂಟೆಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ವಳಗೆ ಸೋಮನಹಳ್ಳಿಯಲ್ಲಿ ಬಾಲಕಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಕಡಬ ಠಾಣೆಗೆ ಕರೆತಂದರು. ಠಾಣೆಗೆ ಕರೆತಂದ ಬಾಲಕಿಯನ್ನು ವಿಚಾರಿಸಿದಾಗ, ಪರಿಚಿತ ಯುವಕನೊಬ್ಬನ ಕರೆಯ ಮೇರೆಗೆ ತಾನು ಮೊದಲು ಬೆಂಗಳೂರಿಗೆ ತೆರಳಿದ್ದಾಗಿ ಹಾಗೂ ಅಲ್ಲಿಂದ ನೇರವಾಗಿ ಚನ್ನರಾಯಪಟ್ಟಣಕ್ಕೆ ಬಂದಿದ್ದಾಗಿ ಪೊಲೀಸರ ಮುಂದೆ ತಿಳಿಸಿದ್ದಾರೆ.

ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡ ಪೊಲೀಸರು ಆಕೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಕಲಂ 2023)ಯ ಸಂಬಂಧಿತ ಕಲಂಗಳು ಹಾಗೂ ಪೋಕ್ಸೋ ಕಾಯ್ದೆ (2012)ಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here