







ನಿಡ್ಯಡ್ಕ: ನಿಡ್ಯಡ್ಕದ ಮ್ಯಾಥ್ಯೂ O.V (ಸಾನು) ಅವರ ಪುತ್ರಿ ಸಾಂದ್ರ ಮ್ಯಾಥ್ಯೂ ಅವರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ, ಇಚ್ಲಂಪಾಡಿ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಯ ಪುಟಾಣಿ ಮಕ್ಕಳ ಅನುಕೂಲಕ್ಕಾಗಿ ಸ್ವಯಂಪ್ರೇರಿತರಾಗಿ ಸೀಲಿಂಗ್ ಫ್ಯಾನ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ.
ಶಾಲಾ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಪದಾಧಿಕಾರಿಗಳು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕಿ ಜೋಮಿಷಾ ಈ ಕೊಡುಗೆಯನ್ನು ಸ್ವೀಕರಿಸಿದರು.
ಚಿಕ್ಕ ವಯಸ್ಸಿನಲ್ಲೇ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಇಂತಹ ಉಪಯುಕ್ತ ಕೊಡುಗೆಯನ್ನು ನೀಡಿದ ಸಾಂದ್ರ ಮ್ಯಾಥ್ಯೂ ಹಾಗೂ ಅವರ ಕುಟುಂಬಸ್ಥರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಧನ್ಯವಾದ ಸಲ್ಲಿಸಿದ್ದಾರೆ.












