






ನರಿಮೊಗರು: ಸರಕಾರಿ ಸಾರ್ವಜನಿಕ ಆಸ್ಪತ್ರೆ ಪುತ್ತೂರು ಮತ್ತು ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರ ಶಾಲೆಯ ಸಹಯೋಗದಲ್ಲಿ ‘ಹದಿಹರೆಯದ ಮಕ್ಕಳ ಆರೋಗ್ಯ’ ಕಾರ್ಯಕ್ರಮವನ್ನು ಆಗಸ್ಟ್ 26ರಂದು ಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.


ಪುತ್ತೂರು ಸರಕಾರಿ ಆಸ್ಪತ್ರೆಯ ಆಪ್ತಸಮಾಲೋಚಕಿ ಸುಶ್ಮಿತಾ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುತ್ತಾ ಹದಿಹರೆಯದಲ್ಲಿ ಹೆಣ್ಣು ಮಕ್ಕಳು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಪೌಷ್ಟಿಕ ಆಹಾರ ಪದ್ಧತಿ ಬಗ್ಗೆ ತಿಳಿಸಿದರು. ಹದಿಹರೆಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢತೆ ಕಾಪಾಡಿಕೊಳ್ಳುವುದು ಮುಖ್ಯ ಎಂದರು. ಶಾಲಾ ಆಡಳಿತಮಂಡಳಿ ಅಧ್ಯಕ್ಷರಾದ ಅವಿನಾಶ್ ಕೊಡಂಕಿರಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿ ಹದಿ ಹರಯದ ದೈಹಿಕ, ಮಾನಸಿಕ, ಸಾಮಾಜಿಕ ಬದಲಾವಣೆಯ ಅರಿವು ವಿದ್ಯಾರ್ಥಿಗಳಿಗೆ ಇರಬೇಕು ಎಂದರು. ಸಹಾಯಕ ಮುಖ್ಯ ಶಿಕ್ಷಕಿ ದಿವ್ಯ, ಕ್ಯಾಂಪಸ್ ಮೆನೇಜರ್ ಕೃಷ್ಣಪ್ಪ ಬಿ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಅಖಿಲಾ ಕೆ ಬಿ ವಂದಿಸಿದರು. ಶಿಕ್ಷಕಿ ಸಂಧ್ಯಾ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.













