ಧರ್ಮಸ್ಥಳ ಗ್ರಾ.ಯೋಜನೆ ಆನಡ್ಕ ಒಕ್ಕೂಟದಿಂದ ಪರಿಸರ ಜಾಗೃತಿ, ಗಿಡನಾಟಿ ಕಾರ್ಯಕ್ರಮ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಪುತ್ತೂರು, ಕೆಮ್ಮಿಂಜೆ ವಲಯದ ಶಾಂತಿಗೋಡು ಗ್ರಾಮದ ಆನಡ್ಕ ಒಕ್ಕೂಟದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕದಲ್ಲಿ ಪರಿಸರ ಜಾಗೃತಿ ಹಾಗೂ ಗಿಡನಾಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಶೋಕ್ ರೈ ಸೊರಕೆ ಉದ್ಘಾಟಿಸಿದರು. ತಾಲೂಕು ಕೃಷಿ ಅಧಿಕಾರಿ ಉಮೇಶ್ ಅವರು ಪರಿಸರ ಸಂರಕ್ಷಣೆ ಹಾಗೂ ಗಿಡಗಳ ಮಹತ್ವದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಗಿರೀಶ್, ವಲಯದ ಸೇವಾ ಪ್ರತಿನಿಧಿಗಳು, ಶಾಲೆಯ ಅಧ್ಯಾಪಕರು, ಎಸ್‌ಡಿಎಂ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here