ಆ.29: ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ

0

ಪುತ್ತೂರು: ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯು ಆ 29ರಂದು ಬೆಳಿಗ್ಗೆ 11 ಗಂಟೆಗೆ ಸಂಘದ ಕೇಂದ್ರ ಕಚೇರಿ ತಿಂಗಳಾಡಿ ಇಲ್ಲಿ ನಡೆಯಲಿದೆ.

ಸಂಘದ ಅಧ್ಯಕ್ಷ ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತುರವರ ಅಧ್ಯಕ್ಷತೆಯಲ್ಲಿ ಈ ಸಭೆಯು ಜರುಗಲಿದ್ದು, ಸಂಘದ ಸರ್ವ ಸದಸ್ಯರುಗಳು ಕ್ಲಪ್ತ ಸಮಯದಲ್ಲಿ ಹಾಜರಿದ್ದು ಸಂಘದ ಬೆಳವಣಿಗೆಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಸಭೆಯನ್ನು ಯಶಸ್ವಿಗೊಳಿಸುವಂತೆ ಸಂಘದ ಆಡಳಿತ ಮಂಡಳಿಯ ಅನುಮತಿ ಮೇರೆಗೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರ್ ರೈ ಡಿ.ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here