ಪುತ್ತೂರು ತಾ| ಬಂಟರ ಸಂಘದ ನೂತನ ಉಪಾಧ್ಯಕ್ಷರಾಗಿ ಪ್ರತಾಪ್ ಚಂದ್ರ ರೈ

0

ಪುತ್ತೂರು: ತಾಲೂಕು ಬಂಟರ ಸಂಘದ ನೂತನ ಉಪಾಧ್ಯಕ್ಷರಾಗಿ ನೆಲ್ಯಾಡಿಯ ಪ್ರತಾಪ್ ಚಂದ್ರ ರೈ ಅವರು ಆಯ್ಕೆಗೊಂಡಿದ್ದಾರೆ ಎಂದು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಹಾಗೂ ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ ತಿಳಿಸಿದ್ದಾರೆ.

ಪ್ರತಾಪ್ ಚಂದ್ರ ಶೆಟ್ಟಿ ಅವರು ಕಾಂಚನಾ ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದು, ನೆಲ್ಯಾಡಿ ವಲಯ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿ ರುತ್ತಾರೆ.. ಪೆರ್ಲ ಸುಬ್ರಹ್ಮಣ್ಯ ದೇವಾಲಯದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಮತ್ತು ಆದರ್ಶ ಯುವಕ ಮಂಡಲದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಈ ಹಿಂದೆ ತಾಲ್ಲೂಕು ಬಂಟರ ಸಂಘದ ಉಪಾಧ್ಯಕ್ಷರಾಗಿದ್ದ ಜಯನಂದ ಬಂಟ್ರಿಯಾಲ್ ಅವರ ನಿಧನದಿಂದ ತೆರವು ಆಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಪ್ರತಾಪ್ ಚಂದ್ರ ರೈ ಅವರ ಆಯ್ಕೆ ನಡೆದಿದೆ.

LEAVE A REPLY

Please enter your comment!
Please enter your name here