






ಪುತ್ತೂರು: ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ಸರ್ವತೋಮುಖ ಪ್ರಗತಿ ಸಾಧಿಸಿರುವುದನ್ನು ಪರಿಗಣಿಸಿ ಸತತ 9ನೇ ಬಾರಿಗೆ ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನ ಪ್ರಶಸ್ತಿ ಪಡೆದುಕೊಂಡಿದೆ.


ಸಂಘದ ಅಧ್ಯಕ್ಷ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರ್ ರೈ ದೇರ್ಲರವರು ಪ್ರಶಸ್ತಿ ಸ್ವೀಕರಿಸಿದರು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್, ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈರವರುಗಳು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿಗಳಾದ ಸೂರಜ್ ರೈ, ಪ್ರೀತಂ ಮತ್ತಿತರರು ಉಪಸ್ಥಿತರಿದ್ದರು.













