







ಪುತ್ತೂರು :ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇದೊಂದು ಉತ್ತಮ ವೇದಿಕೆಯಾಗಿದೆ.ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಸಾಹಿತ್ಯ,ಸಂಗೀತ,ನೃತ್ಯ,ನಾಟಕ ಮುಂತಾದ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ಮತ್ತು ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ.ಹೊಸ ಹೊಸತಾದ ವಿಚಾರಗಳು ,ಸಂಶೋಧನೆಗಳು ಜೀವನಕ್ಕೆ ಹೊಸ ರೂಪಗಳನ್ನು ಕೊಡುತ್ತದೆ.ಎಂದು ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ (ಸಿಬಿಎಸ್ಇ ) ಇದರ ಆಡಳಿತ ಮಂಡಳಿಯ ಸದಸ್ಯರಾದ ಶಂಕರಿ ಶರ್ಮ ಅವರು ಹೇಳಿದರು.


ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಟ್ಯಾಲೆಂಟ್ ಶೋ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಕ್ಷರ ಜ್ಞಾನದ ಜೊತೆಗೆ ಸಂಸ್ಕಾರ ಶಿಕ್ಷಣವು ವಿದ್ಯಾರ್ಥಿಗಳಿಗೆ ಶಿಸ್ತು, ವಿನಯ, ಮಾನಸಿಕ ಸ್ಥೈರ್ಯ,ನೈತಿಕ ಮೌಲ್ಯಗಳ ಅರಿವನ್ನು ಮೂಡಿಸುವುದರ ಜೊತೆಗೆ ಅವರ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಅವಶ್ಯಕವಾಗಿದೆ. ಎಂದು ಹೇಳಿದರು.



ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ರವರು ಮಾತನಾಡುತ್ತಾ ಸೋಲು ಗೆಲುವು ಶಾಶ್ವತವಲ್ಲ ಎಂಬ ಸತ್ಯದ ಅರಿವಿನೊಡನೆ ಮುನ್ನಡೆಯಿರಿ.ಅವಕಾಶಗಳನ್ನು ಉತ್ತಮ ಅಭಿಲಾಷೆಯೊಂದಿಗೆ ನಿಮ್ಮದಾಗಿಸಿಕೊಳ್ಳಿ ಮತ್ತು ಈ ದೇಶದ ಉತ್ತಮ ನಾಗರಿಕರಾಗಿ ಬಾಳಿ ಎಂದು ಹೇಳಿದರು. ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಮನಸೆಳೆಯಿತು. ದೇಶದ ವಿವಿಧ ರೀತಿಯ ನೃತ್ಯ ಪ್ರಕಾರಗಳನ್ನು ಪ್ರದರ್ಶಿಸಿದರು.
ಬಳಿಕ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಚಲನಚಿತ್ರ ನಿರ್ದೇಶಕರಾದ ಕೀರ್ತನ್ ಶೆಟ್ಟಿ ಸುಳ್ಯ ಇವರು ಮಾತನಾಡುತ್ತಾ ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಲು ಸಾಧ್ಯವಾಗುತ್ತದೆ .ಪಠ್ಯೇತರ ಚಟುವಟಿಕೆಗಳಲ್ಲಿ ಅವರ ಆಸಕ್ತಿಯ ಜೊತೆಗೆ ಸೃಜನಾತ್ಮಕತೆ, ಆತ್ಮವಿಶ್ವಾಸವು ವೃದ್ಧಿಸುತ್ತದೆ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಅವಕಾಶ ಕೊಟ್ಟಾಗ ಹೊಸ ಆವಿಷ್ಕಾರಗಳು ಹೊರಹೊಮ್ಮುವ ಸಾಧ್ಯತೆಗಳಿರುತ್ತದೆ.ಎಂದು ಹೇಳಿದರು.
ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ನರೇಂದ್ರ ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾದ , ಸಂಗೀತ ಮತ್ತು ನೃತ್ಯ ಕಲಾವಿದರಾದ ಪ್ರಣಮ್ಯ ಇವರು ಮಾತನಾಡುತ್ತಾ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪರಿಪೂರ್ಣ ವ್ಯಕ್ತಿತ್ವರೂಪಿಸಲು ಪಠ್ಯೇತರ ಮತ್ತು ಸಾಂಸ್ಕೃತಿಕ ಚಟುವಟಿಕೆ ಸಹಕಾರಿಯಾಗಿದ್ದು,ಇಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಳ್ಳುವುದು ಮುಖ್ಯ ಹೊರತು ಸೋಲು ಗೆಲುವಲ್ಲ.ಇಂತಹ ಸುಪ್ತ ಪ್ರತಿಭೆಗಳಿಗೆ ಪ್ರೋತ್ಸಾಹ ಸಿಕ್ಕಾಗ ಮಾತ್ರಯುವಶಕ್ತಿಯು ವಿಶ್ವಕ್ಕೆ ಪರಿಚಿತವಾಗಿ ದೇಶದಕೀರ್ತಿ ಹೆಚ್ಚಿಸಬಲ್ಲದು ಎಂದು ಹೇಳಿದರು.
ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾದ , ಸಂಗೀತ ಮತ್ತು ನೃತ್ಯ ಕಲಾವಿದರಾದ ಪ್ರಣಮ್ಯ ಮತ್ತು ಚಲನಚಿತ್ರ ನಿರ್ದೇಶಕರಾದ ಕೀರ್ತನ್ ಶೆಟ್ಟಿ ಸುಳ್ಯ ಅವರು ಪರೀಕ್ಷಕರಾಗಿ ಭಾಗವಹಿಸಿದ್ದರು.ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳ ತಂಡಕ್ಕೆ ಬಹುಮಾನವನ್ನು ನೀಡಲಾಯಿತು.ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ತಂಡ ಪ್ರಥಮ ಬಹುಮಾನವನ್ನು , ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ತಂಡ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿತು.ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಚೈತ್ರ ಸ್ವಾಗತಿಸಿ, ವಂದಿಸಿದರು.










