







ಪುತ್ತೂರು : ತಿಂಗಳಾಡಿ ಪ್ರಾಥಮಿಕ ಪಶು ಚಿಕಿತ್ಸಾಕೇಂದ್ರ ಹಾಗೂ ಗ್ರಾಮ ಪಂಚಾಯತ್ ಕೆದಂಬಾಡಿ ಇವುಗಳ ಸಹಯೋಗದಲ್ಲಿ ಆ. 26ರಂದು ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಈ ಶಿಬಿರದಲ್ಲಿ ಸುಮಾರು 328 ನಾಯಿಗಳಿಗೆ ಉಚಿತವಾಗಿ ರೇಬಿಸ್ ರೋಗ ನಿರೋಧಕ ಲಸಿಕೆಯನ್ನು ಹಾಕಲಾಯಿತು. ಈ ಕಾರ್ಯಕ್ರಮದಲ್ಲಿ ಪಶು ವೈದ್ಯ ಇಲಾಖೆಯ ಹಿರಿಯ ಪಶು ಪರೀಕ್ಷಕರಾದ ಬಸವರಾಜ್, ರೋಹಿತ್ (ಕಿ. ಪ. ಪ.), ಅರುಣಾ (ಡಿ ದರ್ಜೆ), ಸುನಿಲ್ (ಡಿ ದರ್ಜೆ), ಸುಭಾಷಿಣಿ, ವಸಂತಿ (ಪಶುಸಖಿ) ಹಾಗೂ ತಿಂಗಳಾಡಿ ಪಶು ಚಿಕಿತ್ಸಾ ಕೇಂದ್ರದ ಹಿರಿಯ ಪಶು ಪರೀಕ್ಷಕರಾದ ಕುಮಾರ್, ಕೆದಂಬಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಾವಣ್ಯ ಪಿ., ಕಾರ್ಯದರ್ಶಿ ದೇವಪ್ಪ ನಾಯ್ಕ ಕೆ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಜಯಂತ ಮೇರ್ಲ, ಗಣೇಶ್, ಮೃದುಳಾ, ಶಶಿಪ್ರಭಾ ರೈ, ವಿದ್ಯಾಪ್ರಸಾದ್ ಸಹಕರಿಸಿದರು. ಸ್ಥಳೀಯ ಪಶುವೈದ್ಯಕೀಯ ಇಲಾಖೆ ಹಾಗೂ ಗ್ರಾಮ ಪಂಚಾಯತ್‌ನ ಈ ಜಂಟಿ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.












