






ಪುತ್ತೂರು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸಂಘದ ಅಧ್ಯಕ್ಷ ಎಚ್.ಮಹಮ್ಮದ್ ಆಲಿರವರ ನೇತೃತ್ವದಲ್ಲಿ ಸಂಘವು ಪ್ರತಿಯೊಂದು ವಿಭಾಗದಲ್ಲಿ ಉತ್ತಮ ಕಾರ್ಯ ನಿರ್ವಹಿಸುವುದರೊಂದಿಗೆ ಸತತ 8ನೇ ಬಾರಿ ಎಸ್.ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿಯನ್ನು ಬಾಚಿಕೊಂಡಿದೆ.


ಮಂಗಳೂರಿನಲ್ಲಿ ನಡೆದ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಸಂಘದ ಸಂಘದ ಅಧ್ಯಕ್ಷ ಎಚ್.ಮಹಮದ್ ಆಲಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್ ಕುಮಾರ್ ರೈ ಎನ್.ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ ಬಳೆಜ್ಜ, ಆರ್ಯಾಪು ಕೃಷಿ ಪತ್ತಿನ ಸಹಕಾರ ಸಂಘದ ನಿಕಟಪೂರ್ವ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಂತಿ ಭಾಸ್ಕರ್ ಸಹಿತ ಹಲವರು ಉಪಸ್ಥಿತರಿದ್ದರು.













