ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ

0

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಂಶೋಧನಾ ವಿದ್ಯಾರ್ಥಿ ಹಾಗೂ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ. ಅವರು ಪಿಎಚ್.ಡಿ(ಡಾಕ್ಟರೇಟ್) ಪದವಿಯನ್ನು ಯಶಸ್ವಿಯಾಗಿ ಪಡೆದಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಡಾ. ಈಶ್ವರ ಪಿ. ಅವರ ಮಾರ್ಗದರ್ಶನದಲ್ಲಿ “Performance Evaluation of Primary Agriculture Co-operative Credit Societies in Dakshina Kannada and Udupi Districts” ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಡಾಕ್ಟರೇಟ್ ಪದವಿಯನ್ನು ಪೂರ್ಣಗೊಳಿಸಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನದ ಜೊತೆಗೆ ಸಂಶೋಧನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಅವರ ಸಾಧನೆಗೆ ಮತ್ತೊಂದು ಗರಿಮೆಯನ್ನು ತಂದಿದೆ. ಈ ಶೈಕ್ಷಣಿಕ ಸಾಧನೆಗೆ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಕುಟುಂಬಸ್ಥರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ಶೈಕ್ಷಣಿಕ ಹಾಗೂ ವೃತ್ತಿಜೀವನಕ್ಕೆ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here