ನಾಳೆ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ, ಉಚಿತ ಆರೋಗ್ಯ ತಪಾಸಣಾ ಶಿಬಿರ

0

ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಸಂಘದ ಕೇಂದ್ರ ಕಚೇರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆ.29ರಂದು ನಡೆಯಲಿದೆ.


ಪೂರ್ವಾಹ್ನ 10.30ಕ್ಕೆ ಸಂಘದ ಪ್ರಧಾನ ಕಚೇರಿಯ ಕಲ್ಪವೃಕ್ಷ ಸಹಕಾರಿ ಸೌಧದ ಕಾಮಧೇನು ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಬಿ.ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಯಂ.ದಯಾಕರ ರೈ ಅವರು ತಿಳಿಸಿದ್ದಾರೆ.

ಉಚಿತ ಆರೋಗ್ಯ ತಪಾಸಣಾ ಶಿಬಿರ;
ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಅಶ್ವಿನಿ ಆಸ್ಪತ್ರೆ ನೆಲ್ಯಾಡಿ ಹಾಗೂ ಶ್ರೀನಿವಾಸ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮುಕ್ಕ ಮಂಗಳೂರು ಇವರ ಆಶ್ರಯದಲ್ಲಿ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆ.29ರಂದು ಬೆಳಗ್ಗೆ ಗಂಟೆ 9.30ರಿಂದ ಅಪರಾಹ್ನ ಗಂಟೆ 2.00ರ ತನಕ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಶಿಬಿರ ಉದ್ಘಾಟಿಸಲಿದ್ದಾರೆ. ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ.ಮುರಳೀಧರ ವೈ.ಕೆ. ಅತಿಥಿಯಾಗಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ಹೃದಯರೋಗ, ನರರೋಗ, ಸಾಮಾನ್ಯ ವೈದ್ಯಕೀಯ, ಮೆಡಿಕಲ್ ಗ್ಯಾಸ್ಟ್ರೋಎಂಟರಾಲಜಿ, ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಮೂತ್ರ ರೋಗ, ಮೂಳೆ ಮತ್ತು ಕೀಲು ರೋಗಕ್ಕೆ ಸಂಬಂಧಿಸಿದ ವೈದ್ಯಕೀಯ ಸೇವೆ ಹಾಗೂ ವೈದ್ಯರು ಸೂಚಿಸಿದವರಿಗೆ ಇಸಿಜಿ ಪರೀಕ್ಷೆಯೂ ಉಚಿತವಾಗಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here