






ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ)ದಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕುತೂಹಲ, ಸೃಜನಶೀಲತೆ ಮತ್ತು ನವೀನ ಚಿಂತನೆಯನ್ನು ಬೆಳೆಸುವ ಉದ್ದೇಶದಿಂದ ೨೦೨೬-೨೭ನೇ ಸಾಲಿನ ಸೈನ್ಸ್ ಫೋರಂ(ವಿಜ್ಞಾನ ವೇದಿಕೆ) ಆ.24ರಂದು ಉದ್ಘಾಟಿಸಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್‌ಡಿಎಂ ಕಾಲೇಜು ನಿವೃತ್ತ ಪ್ರಾಂಶುಪಾಲರಾದ ಪ್ರೊ. ಟಿ.ಎನ್. ಕೇಶವರವರು ಮಾತನಾಡಿ ವಿಜ್ಞಾನದ ಬಗ್ಗೆ ನಿರಂತರ ಆಸಕ್ತಿಯನ್ನು ಬೆಳೆಸಿಕೊಳ್ಳುವ ಅಗತ್ಯವನ್ನು ಹೇಳಿ ಅವಲೋಕನ, ಪ್ರಯೋಗ ಮತ್ತು ಅನ್ವೇಷಣೆಯ ಮೂಲಕ ವಿಜ್ಞಾನವನ್ನು ಕಲಿಯುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ವೈಜ್ಞಾನಿಕ ಪ್ರಗತಿಯು ರಾಷ್ಟ್ರದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ, ವಿದ್ಯಾರ್ಥಿಗಳು ಕುತೂಹಲ, ಸೃಜನಶೀಲತೆ ಮತ್ತು ನಿರಂತರ ಕಲಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಮಾತನಾಡಿ ವಿದ್ಯಾರ್ಥಿಗಳು ಭೌತಿಕವಾದಿ ಮನೋಭಾವದಿಂದ ಹೊರಬಂದು ವಿಜ್ಞಾನದ ಬಗ್ಗೆ ಆಸಕ್ತಿ, ಶಿಸ್ತು ಮತ್ತು ದೃಢಸಂಕಲ್ಪವನ್ನು ಬೆಳೆಸಿಕೊಳ್ಳಬೇಕು. ಇಂದಿನ ವೈಜ್ಞಾನಿಕ ಪ್ರಗತಿಯ ಹಿಂದೆ ವಿಜ್ಞಾನಿಗಳ ಪರಿಶ್ರಮ ಮತ್ತು ತ್ಯಾಗವಿದ್ದು, ವಿದ್ಯಾರ್ಥಿಗಳು ಪ್ರೇರಣೆಯನ್ನು ಪಡೆದು ಇತರರಿಗೂ ಪ್ರೇರಣೆಯಾಗಬೇಕು ಎಂದರು.



ಸ್ನೇಹಾ ವಾಗ್ಳೆ ಕಾರ್ಯಕ್ರಮ ನಿರೂಪಿಸಿದರು. ಮಾನಸಾ ಮತ್ತು ತಂಡ ಪ್ರಾರ್ಥಿಸಿದರು. ವಿಜ್ಞಾನ ವೇದಿಕೆಯ ಅಧ್ಯಕ್ಷ ಮನೀಶ್ ಸ್ವಾಗತಿಸಿ, ವಿಜ್ಞಾನ ವೇದಿಕೆಯ ಸಂಚಾಲಕ ಡಾ|ಎಡ್ವಿನ್ ಡಿಸೋಜಾ ಸಂಪನ್ಮೂಲ ವ್ಯಕ್ತಿ ಪರಿಚಯಿಸಿದರು. ಕಾರ್ಯದರ್ಶಿ ದಿಲ್ಶಾನಾ ವಂದಿಸಿದರು. ಡಾ|ಎಡ್ವಿನ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿ ಶ್ರೇರಕ್ಷಾ ಬಿ. ವಿ. ಸಂಯೋಜಿಸಿದರು.










