ನಾಳೆ (ಆ.29ಕ್ಕೆ) ದಿ. ಟಿ.ರಾಧಾಕೃಷ್ಣ ಭಟ್ ಸ್ಮರಣಾರ್ಥ ಕಬಡ್ಡಿ ಪಂದ್ಯಾಟ

0


ಪುತ್ತೂರು: ವಿಶ್ವ ಹಿಂದೂ ಪರಿಷದ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪಿಸಲ್ಪಟ್ಟ ವಿಶ್ವ ಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಸೆ.5ರಂದು ನಡೆಯುವ 16ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆಯ ಪೂರ್ವಭಾಗಿಯಾಗಿ ಆ.29ರಂದು ಹೊನಲು ಬೆಳಕಿನ ಪುರುಷರ ೬೫ ಕೆ.ಜಿ ವಿಭಾಗದ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟ ನಡೆಯಲಿದೆ.


ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ ಗಂಟೆ 10ಕ್ಕೆ ಕಬಡ್ಡಿ ಪಂದ್ಯಾಟ ನಡೆಯಲಿದ್ದು, ಆಹ್ವಾನಿತ ಪ್ರೌಢಶಾಲೆ, ಪದವಿಪೂರ್ವ ವಿದ್ಯಾರ್ಥಿಗಳ ಕಬ್ಬಡಿ ಪಂದ್ಯಾಟವನ್ನು ಶರತ್ ಆಳ್ವ ಕೂರೇಲು ಉದ್ಘಾಟಿಸಲಿದ್ದಾರೆ. ರಾತ್ರಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಜರಂಗದಳ ಮಂಗಳೂರು ವಿಭಾಗ ಸಹ ಸಂಯೋಜಕ ನವೀನ್ ಮೂಡುಶೆಡ್ಡೆ, ಬಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕ ದಿನೇಶ್ ಚಾರ್ಮಾಡಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಖ್ಯಾತ ನ್ಯಾಯವಾದಿ ಮಹೇಶ್‌ಕಜೆ, ಹಿರಿಯ ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ, ಯುವ ಉದ್ಯಮಿ ಕಾರ್ತಿಕ್ ತೆಂಕಪ್ಪಾಡಿ, ಮಾಜಿ ಸೈನಿಕ ಚಂದ್ರಶೇಖರ ಗುಂಡೋಳೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರ ಇದರ ಕೋಶಾಧಿಕಾರಿ ನೀಲಂತ್ ಬೊಳುವಾರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here