ಆ.30:ಡೊನ್ ಬೊಸ್ಕೊ ಕ್ಲಬ್ ನಿಂದ ಪ್ರತಿಭಾ ಪುರಸ್ಕಾರ

0

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಪ್ರಸ್ತುತ ವರ್ಷ ಷಷ್ಟ್ಯಬ್ದ ವರ್ಷವನ್ನು ಆಚರಿಸುತ್ತಿರುವ ಡೊನ್ ಬೊಸ್ಕೊ ಕ್ಲಬ್ ವತಿಯಿಂದ ಶೈಕ್ಷಣಿಕ, ಕ್ರೀಡೆ ಮತ್ತು ವಿಶೇಷ ಸಾಧನೆ ಮಾಡಿದ ಪುತ್ತೂರು ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯಕ್ರಮವಾದ “ಪ್ರತಿಭಾ ಪುರಸ್ಕಾರ-2026” ಕಾರ್ಯಕ್ರಮ ಆ.30 ರಂದು ಪೂರ್ವಾಹ್ನ ಮಾಯಿದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆಯಲಿದೆ.

ಗೌರವ ಉಪಸ್ಥಿತಿಯಾಗಿ ಮಾಯಿದೆ ದೇವುಸ್ ಚರ್ಚ್ ಪ್ರಧಾನ ಧರ್ಮಗುರು ವಂ|ಡಾ|ಜೆ.ಬಿ ಸಲ್ದಾನ್ಹಾ, ಮುಖ್ಯ ಅತಿಥಿಗಳಾಗಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಸುರೇಶ, ಉಪಸ್ಥಿತಿಯಾಗಿ ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ನಿವೃತ್ತ ಪ್ರಾಂಶುಪಾಲ ಪ್ರೊ|ಝೇವಿಯರ್ ಡಿ’ಸೋಜರವರು ಭಾಗವಹಿಸಲಿದ್ದಾರೆ. ಡೊನ್ ಬೊಸ್ಕೊ ಕ್ಲಬ್ ಅಧ್ಯಕ್ಷ ಜೋನ್ ಕುಟಿನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಡೊನ್ ಬೊಸ್ಕೊ ಕ್ಲಬ್ ಕಾರ್ಯದರ್ಶಿ ಸೋನಲ್ ಲೋಬೊ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here