






ಪುತ್ತೂರು: ವಿಶ್ವಕರ್ಮ ಮಹಿಳಾ ಮಂಡಳಿ ಇದರ ವತಿಯಿಂದ ವಿಶ್ವ ಬ್ರಾಹ್ಮಣ ಸೇವಾ ಸಂಘದ ಸಹಕಾರದೊಂದಿಗೆ ಆ.28ರಂದು ನಡೆದ ಶ್ರೀ ವರಮಹಾಲಕ್ಷ್ಮೀ ಪೂಜೆಯು ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಭಕ್ತಿ ಭಾವದಿಂದ ನಡೆಯಿತು.



ವೇ.ಮೂ ಅಭಿಷೇಕ ಪುರೋಹಿತರ ಆಚಾರ್ಯತ್ವದಲ್ಲಿ ನಡೆದ ಪೂಜೆಯಲ್ಲಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ವಿಶ್ವಕರ್ಮ ಮಹಿಳಾ ಮಂಡಳಿಯ ಅಧ್ಯಕ್ಷೆ ಶಾಂತಿ ಸತೀಶ್ ಆಚಾರ್ಯ, ಉಪಾಧ್ಯಕ್ಷರಾದ ಬೇಬಿ ಕೆ ಆಚಾರ್ಯ, ಸಂಧ್ಯಾ ಶ್ರೀನಿವಾಸ್, ಕಾರ್ಯದರ್ಶಿ ಭವಾನಿ ಪ್ರಕಾಶ್, ಕೋಶಾಧಿಕಾರಿ ಸುಜಾತ ಜಗದೀಶ್, ಜೊತೆ ಕಾರ್ಯದರ್ಶಿಗಳಾದ ಶೋಭಾ ನಿತ್ಯಾನಂದ್, ಸುನೀತಾ ಅಶೋಕ್, ಸಂಘಟನಾ ಕಾರ್ಯದರ್ಶಿ ಇಂದಿರಾ ಪುರುಷೋತ್ತಮ ಆಚಾರ್ಯ, ಸಾಂಸ್ಕೃತಿಕ ಕಾರ್ಯದರ್ಶಿ ಗೀತಾ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.














