






ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಇದರ ಮಾರ್ಗದರ್ಶನದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಮತ್ತು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಆ.28ರಂದು ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.


ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ಸಂಧ್ಯಾ ಶಶಿಧರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸುಳ್ಯ ಕುರುಂಜಿಬಾಗ್ ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ ಅವರು ಉಪನ್ಯಾಸ ನೀಡಿದರು.



ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುಂದರ ಗೌಡ ನಡುಬೈಲು, ಸಲಹಾ ಸಮಿತ ಅಧ್ಯಕ್ಷ ಮಾಜಿ ಶಾಸಕ ಸಂಜೀವ ಮಠಂದೂರು, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಪ್ರಶಾಂತ್ ಕೆಮ್ಮಾಯಿ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಅಧ್ಯಕ್ಷ ವಿಶ್ವನಾಥ ಗೌಡ ಬನ್ನೂರು, ಒಕ್ಕಲಿಗ ಗೌಡ ಮಹಿಳಾ ಸಂಘದ ಗೌರವಾಧ್ಯಕ್ಷೆ ವಾರಿಜ ಬೆಳ್ಯಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಲೇಖಾ ಗೋವರ್ಧನ್ ಮತ್ತಿತರರು ಉಪಸ್ಥಿತರಿದ್ದರು.










